Acts 8:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
Kannada BSI Bible 2016
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಪ್ಪನು ಓಡಿ ಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ - ಎಲೈ, ನೀನು ಓದುವದು ನಿನಗೆ ತಿಳಿಯುತ್ತದೋ? ಅನ್ನಲು
Kannada Bible (KNCL) BSI 2016
ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಪ್ಪನು ರಥದ ಹತ್ತಿರಕ್ಕೆ ಓಡಿದನು. ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥ ಓದುತ್ತಿರುವುದನ್ನು ಕೇಳಿಸಿಕೊಂಡು, “ನೀವು ಓದುತ್ತಿರುವುದು ನಿಮಗೆ ಅರ್ಥವಾಗುತ್ತಿದೆಯೇ?” ಎಂದು ಫಿಲಿಪ್ಪನು ಪ್ರಶ್ನಿಸಿದನು.