Acts 8:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
Kannada BSI Bible 2016
ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಯಾರಾದರೂ ನನಗೆ ಅರ್ಥ ತಿಳಿಸಿಕೊಟ್ಟ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ - ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕೂತುಕೋ ಎಂಬದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
Kannada Bible (KNCL) BSI 2016
ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.