Acts 8:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
Kannada BSI Bible 2016
ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಿಗುಂಟಾದ ದೀನಾವಸ್ಥೆಯಲ್ಲಿ ನ್ಯಾಯವು ಇಲ್ಲದೆಹೋಯಿತು. ಆತನ ಸಕಾಲದವರನ್ನು ಹೇಳತಕ್ಕದ್ದೇನು? ಆತನ ಜೀವವನ್ನು ಭೂವಿುಯ ಮೇಲಿನಿಂದ ತೆಗೆದುಬಿಟ್ಟರಲ್ಲಾ ಎಂಬದೇ.
Kannada Bible (KNCL) BSI 2016
ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು. ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ, ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?”