Acts 8:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
Kannada BSI Bible 2016
ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಚುಕಿಯು ಈ ವಚನವನ್ನು ಕುರಿತು - ಪ್ರವಾದಿಯು ಇದನ್ನು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
Kannada Bible (KNCL) BSI 2016
ಆ ಅಧಿಕಾರಿ ಫಿಲಿಪ್ಪನಿಗೆ, “ಇಲ್ಲಿ ಪ್ರವಾದಿ ಯಾರನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾನೆ ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ, ಹೇಳಬಲ್ಲೆಯಾ?’ ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು.