Acts 8:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
Kannada BSI Bible 2016
ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಪ್ಪನು ಉಪದೇಶಿಸುವದಕ್ಕೆ ತೊಡಗಿ ಅದೇ ವಚನವನ್ನು ಆಧಾರ ಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
Kannada Bible (KNCL) BSI 2016
ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.