Acts 8:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
Kannada BSI Bible 2016
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;
Kannada Bible (KNCL) BSI 2016
ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.