Acts 8:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
Kannada BSI Bible 2016
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.
Kannada Bible (KNCL) BSI 2016
ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.