Acts 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
Kannada BSI Bible 2016
ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥಮಾಡಲ್ಪಟ್ಟರು.
Kannada Bible (KNCL) BSI 2016
ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.