Acts 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.
Kannada BSI Bible 2016
ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ - ಅನನೀಯನೇ, ಎಂದು ಅವನನ್ನು ಕರೆಯಲು ಅವನು - ಕರ್ತನೇ, ಇಗೋ, ಇದ್ದೇನೆ ಅಂದನು.
Kannada Bible (KNCL) BSI 2016
ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು, “ಅನನೀಯಾ” ಎಂದು ಕರೆಯಲು ಅವನು, “ಸ್ವಾಮೀ, ಅಪ್ಪಣೆಯಾಗಲಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಮಸ್ಕದಲ್ಲಿ ಅನನೀಯ ಎಂಬ ಹೆಸರಿನ ಶಿಷ್ಯನಿದ್ದನು. ದರ್ಶನದಲ್ಲಿ ಕರ್ತ ಯೇಸುವು ಅವನನ್ನು, “ಅನನೀಯಾ!” ಎಂದು ಕರೆದರು. “ಇಗೋ, ಇದ್ದೇನೆ ಸ್ವಾಮಿ,” ಎಂದು ಅವನು ಉತ್ತರಕೊಟ್ಟನು.