Acts 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.
Kannada BSI Bible 2016
ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಅವನಿಗೆ - ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಅವನು ಪ್ರಾರ್ಥನೆ ಮಾಡುತ್ತಾನೆ.
Kannada Bible (KNCL) BSI 2016
ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತ ಯೇಸುವು ಅವನಿಗೆ, “ನೀನೆದ್ದು ‘ನೇರ ಬೀದಿ’ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬುವನನ್ನು ವಿಚಾರಿಸು. ಅವನು ಪ್ರಾರ್ಥನೆ ಮಾಡುತ್ತಿದ್ದಾನೆ.