Acts 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು.
Kannada BSI Bible 2016
ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣುಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ನೋಡಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ಅಲ್ಲದೆ ಅನನೀಯ ಎಂಬವನು ತನ್ನ ಬಳಿಗೆ ಬಂದು ತಾನು ಮರಳಿ ದೃಷ್ಟಿಯನ್ನು ಪಡೆಯುವಂತೆ ತನ್ನ ಮೇಲೆ ಹಸ್ತನಿಕ್ಷೇಪ ಮಾಡುವುದನ್ನು ದರ್ಶನದಲ್ಲಿ ಕಂಡಿದ್ದಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ದೃಷ್ಟಿ ಪುನಃ ಬರುವಂತೆ ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ಬಂದು ತನ್ನ ಮೇಲೆ ಕೈಗಳನ್ನಿಡುವುದನ್ನು ಅವನು ದರ್ಶನದಲ್ಲಿ ಕಂಡಿದ್ದಾನೆ,” ಎಂದು ಹೇಳಿದರು.