Acts 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.
Kannada BSI Bible 2016
ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮಹಾಯಾಜಕರಿಂದ ಹೊಂದಿದ್ದಾನೆ ಅಂದನು.
Kannada Bible (KNCL) BSI 2016
ಅಷ್ಟುಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.