Acts 9:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.
Kannada BSI Bible 2016
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.
Kannada Bible (KNCL) BSI 2016
ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.