Acts 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.
Kannada BSI Bible 2016
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,