Acts 9:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದ್ದಕ್ಕಿದ್ದಂತೆ, ಮೀನಿನ ಪರೆಯಂತಿದ್ದ ಏನೋ ಒಂದು ಸೌಲನ ಕಣ್ಣುಗಳಿಂದ ಕಳಚಿಬಿದ್ದಿತು. ಸೌಲನಿಗೆ ಮತ್ತೆ ಕಣ್ಣುಕಾಣತೊಡಗಿತು! ಸೌಲನು ಮೇಲೆದ್ದು, ದೀಕ್ಷಾಸ್ನಾನ ಮಾಡಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
Kannada BSI Bible 2016
ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
Kannada Bible (KNCL) BSI 2016
ಆ ಕ್ಷಣವೇ ಸೌಲನ ಕಣ್ಣುಗಳಿಂದ ಪರೆಯೊಂದು ಕಳಚಿಬಿದ್ದಿತು. ಅವನಿಗೆ ಪುನಃ ಕಣ್ಣು ಕಾಣತೊಡಗಿತು. ಎದ್ದು ದೀಕ್ಷಾಸ್ನಾನವನ್ನು ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಕ್ಷಣವೇ, ಸೌಲನ ಕಣ್ಣುಗಳಿಂದ ಪರೆ ಕಳಚಿದಂತಾಗಿ ಅವನಿಗೆ ಪುನಃ ದೃಷ್ಟಿ ಬಂದಿತು. ಅವನು ಎದ್ದು ದೀಕ್ಷಾಸ್ನಾನವನ್ನು ಪಡೆದುಕೊಂಡನು.