Acts 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
Kannada BSI Bible 2016
ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರಾಗ ಮಾಡಿದನು.
Kannada Bible (KNCL) BSI 2016
ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಸೌಲನು ಹೆಚ್ಚೆಚ್ಚು ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತ ಆಗಿದ್ದಾರೆಂದು ರುಜುವಾತುಪಡಿಸುತ್ತಾ ದಮಸ್ಕದ ನಿವಾಸಿಗಳಾದ ಯೆಹೂದ್ಯರನ್ನು ಗಲಿಬಿಲಿಗೆ ಒಳಪಡಿಸಿದನು.