Acts 9:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.
Kannada BSI Bible 2016
ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.
Kannada Bible (KNCL) BSI 2016
ಅದು ಸೌಲನಿಗೆ ತಿಳಿದುಬಂದಿತು. ಅವರು ಅವನನ್ನು ಕೊಲ್ಲಲು ಹಗಲಿರುಳು ಪಟ್ಟಣದ ದ್ವಾರಗಳನ್ನು ಕಾಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರ ಯೋಚನೆ ಸೌಲನಿಗೆ ತಿಳಿಯಿತು. ಅವರು ಅವನನ್ನು ಕೊಲ್ಲುವುದಕ್ಕಾಗಿ ಹಗಲಿರುಳು ಪಟ್ಟಣದ ದ್ವಾರಗಳ ಬಳಿಯಲ್ಲಿ ಹೊಂಚುಹಾಕುತ್ತಿದ್ದರು.