Acts 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.
Kannada BSI Bible 2016
ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ ಒಂದು ಹೆಡಿಗೆಯಲ್ಲಿ ಕೂಡ್ರಿಸಿ ಗೋಡೆಯೊಳಗಿಂದ ಇಳಿಸಿದರು.
Kannada Bible (KNCL) BSI 2016
ಒಂದು ರಾತ್ರಿ ಸೌಲನ ಶಿಷ್ಯರು ಅವನನ್ನು ಕರೆದುಕೊಂಡು ಹೋಗಿ ಗೂಡೆಯೊಂದರಲ್ಲಿ ಕೂರಿಸಿ ಗೋಡೆಯ ಮೇಲಿಂದ ಕೆಳಕ್ಕೆ ಇಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು.