Acts 9:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
Kannada BSI Bible 2016
ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬಾರ್ನಬನು ಅವನನ್ನು ಕೈಹಿಡಿದು ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ ಅವನು ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಕರ್ತನು ಅವನ ಸಂಗಡ ಮಾತಾಡಿದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
Kannada Bible (KNCL) BSI 2016
ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು.