Acts 9:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
Kannada BSI Bible 2016
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.
Kannada Bible (KNCL) BSI 2016
ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.