Acts 9:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.
Kannada BSI Bible 2016
ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ಅವನಿಗೆ - ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು. ಕೂಡಲೆ ಅವನು ಎದ್ದನು.
Kannada Bible (KNCL) BSI 2016
ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.