Acts 9:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. (ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ ‘ಜಿಂಕೆ.’) ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
Kannada BSI Bible 2016
ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
Kannada Bible (KNCL) BSI 2016
ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.