Acts 9:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಲುದ್ದದಲ್ಲಿದ್ದಾಗ ಆಕೆಯು ಕಾಯಿಲೆಯಿಂದ ಸತ್ತುಹೋದಳು. ಜನರು ಆಕೆಯ ದೇಹವನ್ನು ತೊಳೆದು ಮೇಲ್ಮಾಳಿಗೆಯ ಒಂದು ಕೋಣೆಯಲ್ಲಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು.
Kannada BSI Bible 2016
ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಆಕೆ ರೋಗದಲ್ಲಿ ಬಿದ್ದು ಸತ್ತಳು, ಮತ್ತು ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
Kannada Bible (KNCL) BSI 2016
ಅವಳು ಕಾಯಿಲೆಯಿಂದ ಒಂದು ದಿನ ಸತ್ತಳು. ಜನರು ಅವಳ ಶವಕ್ಕೆ ಸ್ನಾನಮಾಡಿಸಿ ಮೇಲಂತಸ್ತಿನ ಕೋಣೆಯಲ್ಲಿ ಇರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಯದಲ್ಲಿ ಆಕೆ ಅಸ್ವಸ್ಥಳಾಗಿ ಸತ್ತುಹೋದಳು. ಆಕೆಯ ಶವಕ್ಕೆ ಸ್ನಾನಮಾಡಿಸಿ, ಅದನ್ನು ಮೇಲೆ ಮಾಳಿಗೆಯ ಕೋಣೆಯಲ್ಲಿ ಇಟ್ಟರು.