Acts 9:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.
Kannada BSI Bible 2016
ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು.
Kannada Bible (KNCL) BSI 2016
ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.