Acts 9:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.
Kannada BSI Bible 2016
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.
Kannada Bible (KNCL) BSI 2016
ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.