Acts 9:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.
Kannada BSI Bible 2016
ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
Kannada Bible (KNCL) BSI 2016
ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.