Acts 9:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.
Kannada BSI Bible 2016
ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.
Kannada Bible (KNCL) BSI 2016
ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.