Acts 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಅಲ್ಲೇ ನಿಂತಿದ್ದರು. ಅವರು ಏನೂ ಮಾತಾಡಲಿಲ್ಲ. ಆ ಜನರು ವಾಣಿಯನ್ನು ಕೇಳಿದರು. ಆದರೆ ಅವರು ಯಾರನ್ನೂ ನೋಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.
Kannada BSI Bible 2016
ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
Kannada Bible (KNCL) BSI 2016
ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಮೂಕರಂತೆ ನಿಂತುಕೊಂಡರು. ಅವರಿಗೆ ಧ್ವನಿ ಕೇಳಿಸಿತೇ ಹೊರತು ಯಾರೂ ಕಾಣಲಿಲ್ಲ.