Acts 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ನೆಲದ ಮೇಲಿಂದ ಎದ್ದು ಕಣ್ಣುಗಳನ್ನು ತೆರೆದನು. ಆದರೆ ಅವನಿಗೆ ಏನೂ ಕಾಣಲಿಲ್ಲ. ಆದ್ದರಿಂದ ಸೌಲನೊಂದಿಗಿದ್ದ ಜನರು ಅವನನ್ನು ಕೈಹಿಡಿದು ದಮಸ್ಕಕ್ಕೆ ಕರೆದೊಯ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
Kannada BSI Bible 2016
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
Kannada Bible (KNCL) BSI 2016
ಸೌಲನು ಮೇಲಕ್ಕೆದ್ದು ಕಣ್ಣರಳಿಸಿ ನೋಡಿದರೂ ಅವನಿಗೇನೂ ಕಾಣಿಸಲಿಲ್ಲ. ಆದುದರಿಂದ ಸಂಗಡಿಗರು ಅವನ ಕೈಹಿಡಿದು ದಮಸ್ಕಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ನೆಲದಿಂದ ಎದ್ದ ಮೇಲೆ ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಅವರು ಅವನ ಕೈಹಿಡಿದು ದಮಸ್ಕದೊಳಗೆ ಕರೆದುಕೊಂಡು ಹೋದರು.