Amos 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.