Amos 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೋಸನು ಹೇಳಿದ್ದೇನೆಂದರೆ, ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”
Kannada BSI Bible 2016
ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು.
Kannada Bible (KNCL) BSI 2016
ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”