Amos 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ದಮಸ್ಕವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.