Amos 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.
Kannada BSI Bible 2016
ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದಮಸ್ಕದ ಲಾಳವಂಡಿಗೆಯನ್ನು ಮುರಿದು ಆವೆನ್ ತಗ್ಗಿನೊಳಗಿಂದ ಸಿಂಹಾಸನಾಸೀನನನ್ನೂ ಬೇತ್ ಎದೆನಿನಿಂದ ರಾಜದಂಡಧಾರಿಯನ್ನೂ ನಿರ್ಮೂಲಮಾಡುವೆನು; ಅರಾಮ್ಯರು ಕೀರಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ.
Kannada Bible (KNCL) BSI 2016
ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.