Amos 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಗಾಜವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋವಿುಗೆ ವಶಮಾಡಿಬಿಟ್ಟಿತಷ್ಟೆ.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.