Amos 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.