Amos 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಮೋವಾಬು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಎದೋವಿುನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿತಷ್ಟೆ.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಮೋವಾಬಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.