Amos 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.
Kannada BSI Bible 2016
ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,
Kannada Bible (KNCL) BSI 2016
ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.