Amos 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
Kannada BSI Bible 2016
ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,
Kannada Bible (KNCL) BSI 2016
ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.