Amos 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ, ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.” ಇದು ಯೆಹೋವನ ನುಡಿ.
Kannada BSI Bible 2016
ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ ಸಕಲರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು; ಇದು ಯೆಹೋವನ ನುಡಿ.
Kannada Bible (KNCL) BSI 2016
ನಾನು ಅವರ ಅಧಿಪತಿಯನ್ನು ಕೊಂದು, ರಾಜ್ಯಾಧಿಕಾರಿಗಳನ್ನು ಸಂಹರಿಸುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.