Amos 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೊನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
Kannada BSI Bible 2016
ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
Kannada Bible (KNCL) BSI 2016
“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.