Amos 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,
Kannada BSI Bible 2016
ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -
Kannada Bible (KNCL) BSI 2016
ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ: