Amos 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನೂ ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.
Kannada BSI Bible 2016
ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.
Kannada Bible (KNCL) BSI 2016
ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.