Amos 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?
Kannada BSI Bible 2016
ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?
Kannada Bible (KNCL) BSI 2016
ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?