Amos 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಇಸ್ರೇಲೇ, ನಿನಗೆ ವಿರುದ್ಧವಾಗಿ ಈ ಸಂಗತಿಗಳನ್ನು ಮಾಡುತ್ತೇನೆ. ಇಸ್ರೇಲೇ, ನಿನ್ನ ದೇವರನ್ನು ಸಂಧಿಸಲು ನಿನ್ನನ್ನು ತಯಾರು ಮಾಡಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!
Kannada BSI Bible 2016
ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ, ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ.
Kannada Bible (KNCL) BSI 2016
ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲೇ, ನಾನು ನಿನಗೆ ಹೀಗೆ ಮಾಡುತ್ತೇನೆ. ನಾನು ನಿನಗೆ ಹೀಗೆ ಮಾಡುವುದರಿಂದ, ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧಮಾಡಿಕೋ.