Amos 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.
Kannada BSI Bible 2016
ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು - ಇಗೋ, ನಿಮ್ಮನ್ನು ಕೊಂಡಿಗಳಿಂದಲೂ ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.
Kannada Bible (KNCL) BSI 2016
“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.