Amos 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
Kannada BSI Bible 2016
ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಊರುಗಳಲ್ಲೆಲ್ಲಾ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೂ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.
Kannada Bible (KNCL) BSI 2016
“ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.