Amos 4:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.
Kannada BSI Bible 2016
ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.
Kannada Bible (KNCL) BSI 2016
ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.