Amos 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
Kannada BSI Bible 2016
ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಟ್ಟದ್ದನ್ನಲ್ಲ, ಒಳ್ಳೆಯದನ್ನು ಅನುಸರಿಸಿರಿ, ಬಾಳುವಿರಿ; ನೀವು ಅಂದುಕೊಂಡಂತೆ ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
Kannada Bible (KNCL) BSI 2016
ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.