Amos 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
Kannada BSI Bible 2016
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.
Kannada Bible (KNCL) BSI 2016
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.