Amos 5:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
Kannada BSI Bible 2016
ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು.
Kannada Bible (KNCL) BSI 2016
ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.